September 23, 2026
Wednesday, September 23, 2026
spot_img

ಇನ್ನೂ ಎರಡು ಬಜೆಟ್ ಮಂಡನೆ ಮಾಡೋಕೆ ನಾನು ರೆಡಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಬಜೆಟ್ ಮಂಡನೆ ಕುರಿತು ಅಂತಿಮ ತೀರ್ಮಾನ ಹೈಕಮಾಂಡ್ ಕೈಯಲ್ಲಿದೆ, ಅವಕಾಶ ನೀಡಿದರೆ ಇನ್ನೂ ಎರಡು ಬಜೆಟ್ ಮಂಡಿಸಲು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಯಾರು ಏನು ಹೇಳಿದರೂ ಅದಕ್ಕಿಂತ ಹೈಕಮಾಂಡ್‌ನ ನಿರ್ಧಾರವೇ ಮುಖ್ಯ ಎಂದು ಅವರು ಸ್ಪಷ್ಟಪಡಿಸಿದರು. ಮೈಸೂರಿನ ಜನ ಮಾತ್ರವಲ್ಲದೆ ರಾಜ್ಯದ ಜನರೂ ತಾವು ಮುಂದುವರಿಯಬೇಕೆಂದು ಬಯಸುತ್ತಿದ್ದಾರೆ ಎಂದರು.

ಮುಂದಿನ ಬಜೆಟ್ ಯಾರು ಮಂಡಿಸಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಅವರು ಮುಂದುವರೆಯಿರಿ ಎಂದರೆ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:

ರಾಜ್ಯ ಬಜೆಟ್ ಕುರಿತು ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರ ಸಾಲ ಮಾಡುವುದು ಅನಿವಾರ್ಯ ಎಂದು ಸಮರ್ಥಿಸಿಕೊಂಡರು. ರಾಜ್ಯದ ಹಣಕಾಸು ಮಿತಿಯೊಳಗೆ ಮಾತ್ರ ಸಾಲ ಮಾಡಲಾಗಿದೆ ಎಂದು ತಿಳಿಸಿದರು. ಈ ಸಾಲದಿಂದ ಜನರಿಗೆ ಹೆಚ್ಚುವರಿ ಹೊರೆ ಆಗಿಲ್ಲ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅನುದಾನ ನೀಡದಿರುವುದೇ ಸಮಸ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೂ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿದೆ ಎಂದು ಟೀಕಿಸಿದರು. ತಮ್ಮ ಬಜೆಟ್ ಎಲ್ಲ ವರ್ಗಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !