ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೋಲ್ನಾಡು ಕಿರು ಸೇತುವೆಯ ಸಿಮೆಂಟಿನ ತಡೆ ಬೇಲಿಗೆ ಕಾರುಡಿಕ್ಕಿ ಹೊಡೆದಿದ್ದು , ಚಾಲಕರಾದ ಚಿತ್ರದುರ್ಗ ನಿವಾಸಿ ಡಾ. ಬಸವರಾಜ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.
ಮಂಗಳೂರು ಕಡೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರು ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದೆ . ಈ ಸಂದರ್ಭ ಕಾರಿನೊಳಗೆ ವೈದ್ಯರಾದ ಡಾ. ಬಸವರಾಜ್ ಸಿಲುಕಿಕೊಂಡಿದ್ದು ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರಗೆ ಎಳೆದಿದ್ದಾರೆ.
ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿದ್ದು , ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಮುಲ್ಕಿ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.



