Saturday, August 30, 2025

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಕುರಿತು ಅಸಭ್ಯ ಕಮೆಂಟ್‌: ಕಿಡಿಗೇಡಿಗಳ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್‌ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.

ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸುದ್ದಿಗಾರರ ಜತೆ ಮಾತನಾಡಿ, ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಕಿಡಿಗೇಡಿಗಳು ಹೇಗೆ ಅಸಭ್ಯ ಸಂದೇಶಗಳನ್ನು ರವಾನಿಸಿದ್ದರೋ ಅದೇ ರೀತಿ ವಿಜಯಲಕ್ಷ್ಮಿ ಅವರಿಗೂ ಅಸಭ್ಯವಾಗಿ, ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ