April 24, 2026
Friday, April 24, 2026
spot_img

CINE | ‘ಧುರಂಧರ್ 2’ ಬುಕ್ಕಿಂಗ್ ಅಬ್ಬರ: 24 ಗಂಟೆಗಳಲ್ಲಿ ಎಷ್ಟು ಟಿಕೆಟ್ ಸೇಲ್ ಆಗಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಅದರ ಮುನ್ನ ಮಾರ್ಚ್ 18ರಂದು ಪೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿವೆ.

ಚಿತ್ರದ ಟ್ರೇಲರ್ ಬಿಡುಗಡೆ ಆದ ಬಳಿಕ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಕ್ಕಿಂಗ್ ಆರಂಭವಾದ ಮೊದಲ 24 ಗಂಟೆಗಳಲ್ಲಿ ಸುಮಾರು 87 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಪ್ರಮುಖ ಟಿಕೆಟ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರತಿ ಗಂಟೆಗೆ ಸಾವಿರಾರು ಟಿಕೆಟ್‌ಗಳು ಮಾರಾಟವಾಗುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ತೋರಿಸುತ್ತದೆ.

ಇದನ್ನೂ ಓದಿ:

ಟ್ರೇಡ್ ವರದಿಗಳ ಪ್ರಕಾರ ಬುಕ್ಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಚಿತ್ರವು ಸುಮಾರು 4 ಕೋಟಿ ರೂಪಾಯಿ ಗಳಿಸಿದೆ. ಪಿವಿಆರ್, ಐನಾಕ್ಸ್ ಹಾಗೂ ಸಿನಿಪೊಲಿಸ್ ಮಲ್ಟಿಪ್ಲೆಕ್ಸ್ಗಳಿಂದ ಮಾತ್ರವೇ ಸುಮಾರು 2.5 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕೆಲವು ನಗರಗಳಲ್ಲಿ ಪ್ರೀಮಿಯಂ ಶೋಗಳ ಟಿಕೆಟ್ ದರ 2,500 ರೂಪಾಯಿವರೆಗೆ ಏರಿದೆ.

ಮಾರ್ಚ್ 18ರಂದು ನಡೆಯಲಿರುವ ಪೇಯ್ಡ್ ಪ್ರೀಮಿಯರ್ ಶೋಗಳಿಂದಲೇ ಚಿತ್ರವು ಈಗಾಗಲೇ 8 ಕೋಟಿಗೂ ಹೆಚ್ಚು ಕಲೆಕ್ಷನ್ ದಾಖಲಿಸಿದೆ. ಮೊದಲ ಭಾಗ ‘ಧುರಂಧರ್’ ವಿಶ್ವದಾದ್ಯಂತ ಭರ್ಜರಿ ಯಶಸ್ಸು ಕಂಡಿದ್ದು, ಇದೀಗ ಎರಡನೇ ಭಾಗವೂ ಅದೇ ಮಟ್ಟದ ದಾಖಲೆ ಮಾಡುವ ನಿರೀಕ್ಷೆ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !