ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ವೃದ್ಧೆ ಒಬ್ಬಂಟಿಯಾಗಿದ್ದಾಗ ಈ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯ ವೇಳೆ ಗಾಯಗೊಂಡಿದ್ದ ಮಹಿಳೆ ನಂತರ ತನ್ನ ಮಗಳ ಬಳಿ ಈ ವಿಷಯವನ್ನು ತಿಳಿಸಿದ್ದಾಳೆ.
ಇದನ್ನೂ ಓದಿ:
ಬಳಿಕ ಕುಟುಂಬದವರು ತಕ್ಷಣವೇ ಅವರನ್ನು ಖಾಂಡ್ವಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಈ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡುವಂತೆ ಕುಟುಂಬಕ್ಕೆ ಸಲಹೆ ನೀಡಿದ್ದಾರೆ.
ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70 ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.



