ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜನತಾದಳ ಯುನೈಟೆಡ್ (JDU) ಪಕ್ಷಕ್ಕೆ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವವನ್ನು ಸ್ವೀಕರಿಸಿದರು.. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಕೇಂದ್ರ ಸಚಿವ ಲಲ್ಲನ್ ಸಿಂಗ್ ಸದಸ್ಯತ್ವವನ್ನು ನೀಡಿದರು.
ನಂತರ ಮಾತನಾಡಿದ ಅವರು, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ.ಪಕ್ಷದ ಕಾರ್ಯಕರ್ತರ ಆಶಯದಂತೆ ಸಂಘಟನೆಯನ್ನು ಬಲಪಡಿಸಲು ತಾವು ಶ್ರಮಿಸುವುದಾಗಿಯೂ ಅವರು ಹೇಳಿದರು.
ನನ್ನ ತಂದೆ ನಿತೀಶ್ ಕುಮಾರ್ ರಾಜ್ಯಸಭೆಗೆ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ನಾನು ಆ ನಿರ್ಧಾರವನ್ನು ಸ್ವೀಕರಿಸುತ್ತೇನೆ ಮತ್ತು ಗೌರವಿಸುತ್ತೇನೆ ಎಂದು ಹೇಳಿದರು. ನಾವೆಲ್ಲರೂ ನನ್ನ ತಂದೆ ನಿತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇವೆ ಎಂದರು.



