March 9, 2026
Monday, March 9, 2026
spot_img

ಸಿಲಿಕಾನ್ ಸಿಟಿಯಲ್ಲಿ ಜೂ ಎನ್‌ಟಿಆರ್: ತಾರಕ್ ನೋಡೋಕೆ ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಪ್ರಹಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಾಲಿವುಡ್‌ ಜೂನಿಯರ್ ಎನ್‌ಟಿಆರ್ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಬೆಂಗಳೂರಿನ ಮಹದೇವಪುರದಲ್ಲಿ ನಿರ್ಮಾಣವಾಗಿರುವ ಕಿಮ್ಸ್ (KIMS) ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಎನ್‌ಟಿಆರ್‌ ಅವರನ್ನು ವಿಶೇಷ ಅತಿಥಿಯನ್ನಾಗಿ ಕರೆಸಲಾಗಿತ್ತು. ಆದರೆ ಎನ್‌ಟಿಆರ್ ಬೆಂಗಳೂರಿಗೆ ಆಗಮಿಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಆಗಮಿಸಿದ್ದರು. ಪೊಲೀಸರು ಈ ಅಭಿಮಾನಿಗಳ ಚದುರಿಸಲು ಲಾಠಿ ಚಾರ್ಚ್ ಮಾಡಿದ್ದಾರೆ.

ತಾರಕ್‌ ಇದ್ದ ಕಾರು ಕಂಡ ತಕ್ಷಣ ಅಭಿಮಾನಿಗಳು “ಟೈಗರ್… ಟೈಗರ್…” ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು. ಸ್ಪತ್ರೆಯ ಬಳಿ ಅವರನ್ನು ನೋಡಲು ಅಭಿಮಾನಿಗಳ ಸಾಗರದಂತೆ ಹರಿದುಬಂದಿದ್ದರು. ಹಾಗಾಗಿ, ಮಹದೇವಪುರದ ಸುತ್ತಮುತ್ತಲ ಪ್ರದೇಶದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸುಮಾರು ಐದು ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ಸ್ವಲ್ಪ ತೊಂದರೆಯಾಯಿತು. ಪೊಲೀಸರ ಅಂದಾಜಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ವಿಶೇಷ ಕ್ರಮ ಕೈಗೊಳ್ಳಬೇಕಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಅಲ್ಲದೇ, ಕೆಲ ಅಭಿಮಾನಿಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಅವರ ಮೇಲೆ ಲಾಠಿ ಬೀಸಿದ್ದಾರೆ.

ಎನ್‌ಟಿಆರ್ ಅವರನ್ನು ನೋಡಲು ರಸ್ತೆಗಳಲ್ಲಿ ಜಮಾಯಿಸಿದ್ದ ಅಭಿಮಾನಿಗಳು “ಸಿಎಂ… ಸಿಎಂ…” ಎಂದು ಘೋಷಣೆ ಕೂಗುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !