March 9, 2026
Monday, March 9, 2026
spot_img

ಪ್ರಧಾನಿ ಮೋದಿ ಸಂಕಲ್ಪದಿಂದ ಶೀಘ್ರದಲ್ಲೇ ಮಹಿಳಾ ಮೀಸಲಾತಿ ಅನುಷ್ಠಾನ: ಎಚ್.ಡಿ. ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನರೇಂದ್ರ ಮೋದಿ ಅವರ ಸಂಕಲ್ಪದಿಂದ ಇವತ್ತು ರಾಷ್ಟ್ರದಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಮಹಿಳಾ ಘಟಕ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ನೀಡಿರುವ ಶೇ.33 ಮೀಸಲಾತಿ ಮುಂದಿನ ದಿನಗಳಲ್ಲಿನ ಸಂಸದೀಯ ವ್ಯವಸ್ಥೆಯ ಹೆಗ್ಗಳಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ. 2032-33ರಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರಬಹುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ 33% ಮಹಿಳಾ ಮೀಸಲಾತಿ ಜಾರಿಗೆ ಬಂದಾಗ ವಿಧಾನಸಭೆಯಲ್ಲಿ 75 ಜನ ಮಹಿಳೆಯರೇ ಶಾಸಕಿಯರು ಇರುತ್ತಾರೆ. ಮುಂದೆ ಮಹಿಳಾ ಮುಖ್ಯಮಂತ್ರಿಯೇ ಆಗಬಹುದು ಎಂದು ಹೇಳಿದರು.

ಮಹಿಳಾ ಮೀಸಲಾತಿ ಕುರಿತು ಅಂದು ದೇವೇಗೌಡರು ಕನಸು ಕಂಡಿದ್ದವರು . ಈ ರಾಜ್ಯದಲ್ಲಿ ಪ್ರಥಮ ಬಾರಿಗೆ 70% ಮಹಿಳಾ ಶಿಕ್ಷಕರನ್ನು ನೇಮಿಸಿಕೊಂಡಿದ್ದು ದೇವೇಗೌಡರು ಎಂದು ಕುಮಾರಸ್ವಾಮಿ ಅವರು ಹೇಳಿದರು.

1996ರಲ್ಲಿ ದೇವೇಗೌಡರು ಪ್ರಧಾನಿ ಆಗಿ ಹೋದಮೇಲೆ ರಾಜ್ಯಸಭೆಯಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ವಿಧೇಯಕ ಮಂಡಿಸಿದ್ದರು. ಆದರೆ, ಸಮಾಜವಾದಿ ಪಕ್ಷ, ಆರ್ ಜೆಡಿ ಬೆಂಬಲ ನೀಡದ ಕಾರಣಕ್ಕೆ ಲೋಕಸಭೆಯಲ್ಲಿ ಆ ವಿಧೇಯಕ ಅಂಗೀಕಾರ ಆಗಲಿಲ್ಲ. ಆದರೆ, ದೈವ ಕೃಪೆ ಇತ್ತು. ನಾವು ಇಂದು ಎನ್ಡಿಎ ಮೈತ್ರಿಯಲ್ಲಿ ಇದ್ದೇವೆ. ದೇವೇಗೌಡರ ಕನಸನ್ನು ಮೋದಿಯವರು ಲೋಕಸಭೆಯಲ್ಲಿ ನನಸು ಮಾಡಿದರು ಎಂದು ಕುಮಾರಸ್ವಾಮಿ ಅವರು ಹೇಳಿದರು.

.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !