ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಫೈನಲ್ ನಲ್ಲಿ ಟೀಂ ಇಂಡಿಯಾ ಓಪನರ್ ಸಂಜು ಸಾಮ್ಸನ್ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಸಂಜು ಸಾಮ್ಸನ್, 89 ರನ್ಗಳಿಸಿ ನಿರ್ಗಮಿಸಿದ್ದಾರೆ. ಈ ಮಹತ್ವದ ಪಂದ್ಯದ ವೇಳೆ ಸಂಜು ಸಾಮ್ಸನ್ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 2026 ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಬರೋಬ್ಬರಿ 24 ಸಿಕ್ಸರ್ ಬಾರಿಸಿರುವ ಮೂಲಕ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2026ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಇದುವರೆಗೆ ಕೇವಲ 5 ಪಂದ್ಯಗಳನ್ನು ಆಡಿರುವ ಸಂಜು ಸ್ಯಾಮ್ಸನ್ 24 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಅವರ 15 ಸಿಕ್ಸರ್ಗಳ ದಾಖಲೆಯನ್ನು ಮೀರಿಸಿದ್ದಾರೆ.
46 ಬಾಲ್ಗಳನ್ನು ಎದುರಿಸಿ 89 ರನ್ಗಳಿಸಿ ಔಟಾಗುವ ಮೂಲಕ ಶತಕ ವಂಚಿತರಾಗಿದ್ದಾರೆ. ಐದು ಬೌಂಡರಿ ಜೊತೆ 8 ಸಿಕ್ಸರ್ ಸಿಡಿಸುವ ಮೂಲಕ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಡಿಸಿದ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಸಂಜು ಅವರ ಹಿಂದೆ ಫಿನ್ ಅಲೆನ್ ಇದ್ದು, 20 ಸಿಕ್ಸರ್ ಸಿಡಿಸಿದ್ದಾರೆ.



