July 16, 2026
Thursday, July 16, 2026
spot_img

WEATHER | ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ತಾಪಮಾನ ಇನ್ನೂ ಜಾಸ್ತಿಯಾಗತ್ತಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಈಗಾಗಲೇ ಹೈರಾಣಾಗಿರುವ ಜನಕ್ಕೆ ಇನ್ನಷ್ಟು ಬಿಸಿಲು ಜಾಸ್ತಿಯಾಗುತ್ತದೆ ಎಂದು ಹವಾಮನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮಾರ್ಚ್‌ ಎರಡನೇ ವಾರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ. ಆರೋಗ್ಯ ಇಲಾಖೆಗೂ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸ್ಟ್ರೋಕ್‌, ಡೀಹೈಡ್ರೇಷನ್‌ ಇನ್ನಿತರ ಸಮಸ್ಯೆಗಳು ಬಾಧಿಸುವ ಸಾಧ್ಯತೆ ಇದ್ದು, ಹಿರಿಯರು, ಮಕ್ಕಳು, ಗರ್ಭಿಣಿ, ಬಾಣಂತಿಯರು ಮಧ್ಯಾಹ್ನದ ಸಮಯ ಮನೆಯಲ್ಲಿಯೇ ಇರುವುದು ಉತ್ತಮವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !