ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ಪರಿಷ್ಕರಣಾ ಪಟ್ಟಿಯಲ್ಲಿ ತಮ್ಮ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಕೆಲವು ವ್ಯಕ್ತಿಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಹಿರಿಯ ಅಡ್ವೋಕೆಟ್ ಗುರುಸ್ವಾಮಿ ಅವರು, ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಇವರು, ಈ ಹಿಂದೆ ಮತ ಚಲಾಯಿಸಿದ ಮತದಾರರಾಗಿದ್ದು, ಇದೀಗ ಅವರ ದಾಖಲೆಗಳನ್ನು ಅಂಗೀಕರಿಸಲಾಗಿಲ್ಲ ಎಂದು ವಾದಿಸಿದರು.
ಸಂಕ್ಷಿಪ್ತ ಸಲ್ಲಿಕೆಗಳನ್ನು ಆಲಿಸಿದ ನಂತರ ಸಿಜೆಐ ಸೂರ್ಯಕಾಂತ್ ಮತ್ತು ನ್ಯಾ ಜೊಯಮಲ್ಯ ಭಾಗ್ಚಿ ಅವರನ್ನೊಳಗೊಂಡ ಪೀಠ ಮಂಗಳವಾರ ಈ ವಿಷಯವನ್ನು ಆಲಿಸಲು ಒಪ್ಪಿಗೆ ನೀಡಿತು.
ಫೆ. 24ರಂದು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗ ವ್ಯಕ್ತಪಡಿಸಿದ್ದ ಕಳವಳಗಳನ್ನು ಸುಪ್ರೀಂಕೋರ್ಟ್ ಆಲಿಸಿತ್ತು. ನ್ಯಾಯಾಲಯವು ಮತದಾರರ ಪಟ್ಟಿಯ ಸ್ಪಷ್ಟತೆ ಮತ್ತು ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು. ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ಎಸ್‌ಐಆರ್ ತ್ವರಿತಗೊಳಿಸಲು ಕಲ್ಕತ್ತಾ ಹೈಕೋರ್ಟ್ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರುವ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಬಹುದು ಎಂದು ಆದೇಶಿಸಿತ್ತು.



