May 2, 2026
Saturday, May 2, 2026
spot_img

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರ್ಣ, ಇಂದು ಭರ್ಜರಿ ಔತಣಕೂಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ ಆರು ವರ್ಷ ಪೂರ್ಣವಾಗಿದೆ. ಈ ಸಂಭ್ರಮಾಚರಣೆಗೆ ಔತಣಕೂಟವೊಂದನ್ನು ಏರ್ಪಡಿಸಲಾಗಿದೆ.

ಇಂದಿನ ಔತಣಕೂಟ ಜೊತೆ ಮಹತ್ವದ ಘೋಷಣೆ ಅಥವಾ ಸ್ಪಷ್ಟ ಸಂದೇಶ ರವಾನೆಗೆ ಡಿಕೆಶಿ ಮುಂದಾಗುವ ಸಾಧ್ಯತೆ ಇದೆ. ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗೊಂದಲದ ನಡುವೆ ಡಿಸಿಎಂ ಡಿನ್ನರ್ ಕೂಟ ಸಾಕಷ್ಟು ಕುತೂಹಲ ಮೂಡಿಸಿದೆ. ಸಹಜವಾಗಿಯೇ ಕೆಪಿಸಿಸಿ ಅಧ್ಯಕ್ಷರ 6 ವರ್ಷದ ಪೂರೈಕೆ ಜೊತೆ ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಸ್ವಲ್ಪ ದಿನಗಳ ಹಿಂದಷ್ಟೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಯುವ ಬಗ್ಗೆ ಮಾತನಾಡಿದ್ದರು. ಈ ಬೆಳವಣಿಗೆಗಳ ಮಧ್ಯೆ ಈ ಪಾರ್ಟಿ ಮಹತ್ವ ಪಡೆದುಕೊಂಡಿದೆ. ಏನಾದರೂ ಅನೌನ್ಸ್‌ ಆಗಬಹುದಾ ಎಂದು ಜನ ಕಾಯುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !