March 10, 2026
Tuesday, March 10, 2026
spot_img

ಹರಿಯಾಣದಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರ ದುರ್ಮರಣ: ಐವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಸಿಧ್ರಾವಲಿ ಪ್ರದೇಶದಲ್ಲಿರುವ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಗೋಡೆ ಕುಸಿದ ಪರಿಣಾಮ ಏಳು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಇನ್ನೂ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಗ್ನೇಚರ್ ಗ್ಲೋಬಲ್ ಸೊಸೈಟಿ ನಿರ್ಮಾಣ ಸ್ಥಳದ ಒಳಚರಂಡಿ ಸಂಸ್ಕರಣಾ ಘಟಕದ ಬಳಿ ಸುಮಾರು 12 ರಿಂದ 15 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಗೋಡೆ ಏಕಾಏಕಿ ಕುಸಿದಿದೆ. ಇದರಿಂದ ಕಾರ್ಮಿಕರು ಮಣ್ಣು ಮತ್ತು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಇದನ್ನೂ ಓದಿ:

ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆದರು.

ಮೃತರಾದ ಕಾರ್ಮಿಕರ ಗುರುತು ಅವರನ್ನು ಹೊಂದಿದ್ದ ಗುರುತಿನ ಚೀಟಿಗಳ ಆಧಾರದಲ್ಲಿ ಪತ್ತೆಯಾಗಿದೆ. ಗಾಯಗೊಂಡ ಐವರನ್ನು ರಾಜಸ್ಥಾನದ ಭಿವಾಡಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ದುರಂತಕ್ಕೆ ನಿಖರ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !