March 10, 2026
Tuesday, March 10, 2026
spot_img

ಮಹಾಕಾಳಿ ದೇವಸ್ಥಾನ ತೆರವು: ವಿಶ್ವ ಹಿಂದು ಪರಿಷತ್, ಭಜರಂಗದಳ ಮುಖಂಡರಿಂದ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಇಲ್ಲಿಯ ಕುಸುಗಲ್ ರಸ್ತೆಯಲ್ಲಿರುವ ನೈರುತ್ಯ ರೈಲ್ವೆ ಗಾಲ್ಫ್ ಮೈದಾನದಲ್ಲಿದ್ದ ಬನ್ನಿ ಮಹಾಕಾಳಿ ದೇವಿ ದೇವಸ್ಥಾನ ಹಾಗೂ ಸ್ವಾಮಿ ವಿವೇಕಾನಂದರ ಪುತ್ಥಳಿ ತೆರವು ಗೊಳಿಸಿರುವುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಗಳಾವರ ಇಲ್ಲಿಯ ಮೈದಾನದಕ್ಕೆ ಭೇಟಿ ನೀಡಿ ಪರಿಶೀಲಿಸಿದ ರು. ಬಳಿಕ ಪ್ರತಿಭಟನಾ ಮೆರವಣಿಗೆ ಮೂಲಕ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ಕಚೇರಿಗೆ ನಡೆಸಿದರು. ಈ ವೇಳೆ ರೈಲ್ವೆ ಅಧಿಕಾರಿಗಳು ಸ್ಪಂದಿಸದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. ವೀಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ ಅವರ ಹೆಸರಿನ ನಾಮಫಲಕ ಕಿತ್ತೆಸೆದು ಅಸಮಾಧಾನ ವ್ಯಕ್ತಪಡಿಸಿದರು.

ದೇವಸ್ಥಾನ ಹಾಗೂ ಸ್ವಾಮಿ ವಿವೇಕಾನಂದರ ಪುತ್ಥಳಿ ತೆರವುಗೊಳಿಸಿ ಹಿಂದು ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ತಕ್ಷಣ ದೇವಸ್ಥಾನ ಹಾಗೂ ಪುತ್ಥಳಿ ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಹಿಂದು ಮುಖಂಡರು ಹಾಗೂ ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು.

ಹಿಂದು‌ ಮುಖಂಡ ಜಯತೀರ್ಥ ಕಟ್ಟಿ, ರಮೇಶ ಕದಂ, ಚೇತನ್ ರಾವ್, ಪ್ರಶಾಂತ ನರಗುಂದ, ಶಂಕರ ಕಮತರ, ಸಂತೋಷ, ಸುಭಾಸಿಂಗ್ ಜಮಾದಾರ, ಗಣೇಶ ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !