ಹೊಸ ದಿಗಂತ ವರದಿ, ಕಲಬುರಗಿ:
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.
ಹಾಲಿ ಎಂಎಲ್ಸಿ ಶಶೀಲ್ ನಮೋಶಿ ಅವರನ್ನು ಮತ್ತೆ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ.
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.
ಈ ಕ್ಷೇತ್ರದಲ್ಲಿ ಮೇಲ್ಕಂಡ ಏಳು ಜಿಲ್ಲೆಗಳಲ್ಲಿನ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತದಾರರಾಗಿ ನೋಂದಾಯಿಸಿಕೊಂಡು ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ವಿಧಾನ ಪರಿಷತ್‌ಗೆ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ.
ಕ್ಷೇತ್ರ-ಅಭ್ಯರ್ಥಿಗಳು
ನಾರ್ಥ್ ಈಸ್ಟ್ ಟೀಚರ್ ಕ್ಷೇತ್ರಕ್ಕೆ- ಶಶೀಲ್ ಜಿ ನಮೋಶಿ
ವೆಸ್ಟ್ ಗ್ರ್ಯಾಜುವೇಟ್ ಕ್ಷೇತ್ರಕ್ಕೆ -ಎಸ್.ವಿ.ಸಂಕನೂರ
ಸೌಥ್ ಈಸ್ಟ್ ಗ್ರ್ಯಾಜುವೇಟ್ ಕ್ಷೇತ್ರಕ್ಕೆ-ಕೆ.ಎಂ.ಸುರೇಶ್



