ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗೆಳೆಯನ ಮಾನಸಿಕ ಕಿರುಕುಳದಿಂದ ಬೇಸತ್ತು ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ಮುಂಬೈನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸ್ತುತಿ ಸೋನ್ವಾನೆ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಎಂಡಿಎಸ್ ವಿದ್ಯಾರ್ಥಿಯಾಗಿದ್ದ ಸ್ತುತಿ, ಮೋಸ ಮಾಡಿದ್ದಾಳೆಂದು ಗೆಳೆಯ ಅವಮಾನಿಸುತ್ತಿದ್ದ. ಇದರಿಂದ ರಿಂದ ಮನನೊಂದು ಸ್ತುತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ. ಡೆತ್ನೋಟ್ನಲ್ಲಿ ದೆಹಲಿಯ ಹೃದಯವಿದ್ರಾವಕ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ್ದಾಳೆ.
ಮುಂಬೈನ ಆಂಟೋಪ್ ಹಿಲ್ ಬಳಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಆಕೆ ತನ್ನ ಕೋಣೆಯಿಂದ ಹೊರಬರದಿದ್ದಾಗ, ಪೋಷಕರು ಕರೆ ಮಾಡಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೋಣೆಯ ಬಾಗಿಲು ಒಡೆದು ನೋಡಿದಾಗ, ಅವಳು ಸೀಲಿಂಗ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.
ಪೊಲೀಸರು ಈಗ ಆಕೆಯ ಗೆಳೆಯನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.



