March 11, 2026
Wednesday, March 11, 2026
spot_img

T20 ರ‍್ಯಾಂಕಿಂಗ್‌ | ಬ್ಯಾಟಿಂಗ್ ನಲ್ಲಿ ಅಭಿಷೇಕ್ ಶರ್ಮಾ ಟಾಪ್, ಬೌಲಿಂಗ್ ನಲ್ಲಿ ಅಗ್ರ ಸ್ಥಾನ ಕಳೆದುಕೊಂಡ ವರುಣ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ ಟೂರ್ನಿಯ ಬಳಿಕ ರ‍್ಯಾಂಕಿಂಗ್‌ ನಲ್ಲಿ ಬ್ಯಾಟಿಂಗ್ ನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಪ್ರಮುಖ ಏರಿಕೆಯಲ್ಲಿ, ಸ್ಟಾರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಎರಡು ಸ್ಥಾನಗಳ ಏರಿಕೆ ಕಂಡು ಈಗ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ಸಾಹಿಬ್‌ಜಾದಾ ಫರ್ಹಾನ್ 848 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಫಿಸ್ ಸಾಲ್ಟ್ 792 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಸ್ಟಾರ್ ಆಟಗಾರರಾದ ತಿಲಕ್‌ ವರ್ಮಾ ಮತ್ತು ಸೂರ್ಯ ಕುಮಾರ್ ಯಾದವ್ ಕೂಡ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ತಿಲಕ್‌ ವರ್ಮಾ 742 ಅಂಕಗಳನ್ನು ಪಡೆದು 7ನೇ ಸ್ಥಾನ ಪಡೆದರೆ, ಸೂರ್ಯ ಕುಮಾರ್ ಯಾದವ್ 722 ಅಂಕಗಳನ್ನು ಪಡೆದು 9ನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ನಲ್ಲಿ ಭಾರತದ ಸ್ಪಿನ್ನರ್‌ ವರುಣ್ ಚಕ್ರವರ್ತಿ ಅವರು ಐಸಿಸಿ ಟಿ20ಐ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಕಳೆದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 14 ವಿಕೆಟ್‌ಗಳ ಮೂಲಕ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರೂ ವರಣ್‌ ಶ್ರೇಯಾಂಕದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ್ದು, ಈ ಬಾರಿ ಅಫ್ಘಾನಿಸ್ತಾನ ತಂಡದ ಸ್ಪಿನ್ನರ್‌ ರಶೀದ್‌ ಖಾನ್‌ ಅವರಿಗೆ ಆ ಸ್ಥಾನ ಒಲಿದಿದೆ.

ಪಾಕಿಸ್ತಾನದ ಅಬ್ರಾರ್ ಅಹ್ಮದ್ 736 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಉಳಿದಿದ್ದಾರೆ. ಇಂಗ್ಲೆಂಡ್‌ನ ಅನುಭವಿ ಸ್ಪಿನ್ನರ್ ಆದಿಲ್ ರಶೀದ್ ನಾಲ್ಕನೇ ಸ್ಥಾನದಲ್ಲಿದ್ದಾರೆ, ದಕ್ಷಿಣ ಆಫ್ರಿಕಾದ ಕಾರ್ಬಿನ್ ಬಾಷ್ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ. ಮತ್ತು ಆಸ್ಟ್ರೇಲಿಯಾದ ಆಡಮ್ ಜಂಪಾ ಆರನೇ ಸ್ಥಾನದಲ್ಲಿದ್ದಾರೆ.

ಫೈನಲ್‌ನಲ್ಲಿ ನಾಲ್ಕು ವಿಕೆಟ್‌ಗೆ 15 ರನ್ ನೀಡಿ ಭಾರತದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದ ಜಸ್‌ಪ್ರೀತ್ ಬುಮ್ರಾ ಒಂದು ಸ್ಥಾನವನ್ನು ಏರಿಕೆ ಕಂಡಿದ್ದಾರೆ ಹಾಗೂ ಆರನೇ ಸ್ಥಾನಕ್ಕೆ ಬಂದಿದ್ದಾರೆ. ಏಳು ಪಂದ್ಯಗಳಲ್ಲಿ 11 ವಿಕೆಟ್ ಪಡೆದ ಅಕ್ಷರ್ ಪಟೇಲ್, ಇತ್ತೀಚಿನ ಟಿ20ಐ ಬೌಲರ್‌ಗಳ ಶ್ರೇಯಾಂಕದಲ್ಲಿ ಆರು ಸ್ಥಾನ ಏರಿ 17ನೇ ಸ್ಥಾನಕ್ಕೆ ಬಂದಿದ್ದಾರೆ.

ಟಿ20ಐ ಆಲ್‌ರೌಂಡರ್ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕಾಗಿ ಜಿಂಬಾಬ್ವೆ ನಾಯಕ ಸಿಕಂದರ್ ರಾಜಾ ಮತ್ತು ಭಾರತದ ಹಾರ್ದಿಕ್ ಪಾಂಡ್ಯ ಇಬ್ಬರೂ ಈ ವಾರ ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಅಂಕಗಳನ್ನು ಗಳಿಸಿದ್ದಾರೆ. ರಾಜಾ 328 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಹಾರ್ದಿಕ್ 299 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿ ಇದ್ದಾರೆ.

ಮತ್ತೊಂದೆಡೆ ನ್ಯೂಜಿಲೆಂಡ್‌ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಮೂರನೇ ಸ್ಥಾನ ಏರಿ ಒಂಬತ್ತನೇ ಸ್ಥಾನಕ್ಕೆ ಬಂದು ವೈಯಕ್ತಿಕ ಅತ್ಯುತ್ತಮ ರೇಟಿಂಗ್ ದಾಖಲಿಸಿದ್ದಾರೆ. ಇಂಗ್ಲೆಂಡ್‌ನ ವಿಲ್ ಜ್ಯಾಕ್ಸ್ ಕೂಡ ದೊಡ್ಡ ಏರಿಕೆ ಕಂಡಿದ್ದು, 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನದ ಬಳಿಕ ಐದು ಸ್ಥಾನ ಏರಿಕೆ ಕಂಡು 13ನೇ ಸ್ಥಾನಕ್ಕೇರಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !