ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರಯಾಗ್ರಾಜ್ ಕುಂಭಮೇಳದ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಮನೆಮಾತಾಗಿದ್ದ ಇಂದೋರ್ನ ಸುಂದರಿ ಮೋನಿ ಭೋಂಸ್ಲೆ ಅಲಿಯಾಸ್ ಮೊನಾಲಿಸಾ ಕೇರಳದಲ್ಲಿ ತಮ್ಮ ಬಾಯ್ಫ್ರೆಂಡ್ ಜೊತೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮಲಯಾಳಂ ಚಿತ್ರದ ಚಿತ್ರೀಕರಣಕ್ಕಾಗಿ ತಿರುವನಂತಪುರದಲ್ಲಿರುವ ಮೊನಾಲಿಸಾ,ತನ್ನ ಗೆಳೆಯನೊಂದಿಗೆ ಥಂಪನೂರು ಪೊಲೀಸ್ ಠಾಣೆಗೆ ಬಂದು ತನ್ನ ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ.
ತಮ್ಮ ಪೋಷಕರು ತಮಗೆ ಬಲವಂತದ ಮದುವೆ ಮಾಡಲು ಯತ್ನಿಸುತ್ತಿದ್ದು, ಈ ಬಲವಂತದ ಮದುವೆಯಿಂದ ತಮಗೆ ರಕ್ಷಣೆ ಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇತ್ತ ಮೂಲತಃ ಮಧ್ಯಪ್ರದೇಶದ ಇಂದೋರ್ನವರಾದ ಮೊನಾಲಿಸಾ ಭೋಂಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಪ್ರೀತಿಸಿದ್ದು, ಅವರೊಟ್ಟಿಗೆ ಮದುವೆ ಆಗುವುದಾಗಿ ಹೇಳಿದ್ದಾರೆ. ಆದರೆ ಅವರ ಪೋಷಕರು ಮೋನಸಿಲಾಗೆ ಬೇರೆ ಮದುವೆ ಮಾಡಲು ನಿರ್ಧರಿಸಿದ್ದು, ತಾವು ನೋಡಿದ ವರನೊಡನೆ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾರೆ.
ಮೊನಾಲಿಸಾ ಮತ್ತು ಮಹಾರಾಷ್ಟ್ರ ಮೂಲದ ಫರ್ಮಾನ್ ಖಾನ್ ಕಳೆದ ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದಾರೆ. ಇವರ ಅಂತರ್ಧರ್ಮೀಯ ವಿವಾಹಕ್ಕೆ ಮೊನಾಲಿಸಾ ಅವರ ತಂದೆ ವಿಜಯ್ ಸಿಂಗ್ ಭೋಂಸ್ಲೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ .
ಇದೀಗ ಮೊನಾಲಿಸಾ ಅವರ ದೂರನ್ನು ಸ್ವೀಕರಿಸಿರುವ ಪೊಲೀಸರು, ಆಕೆ ವಯಸ್ಕಳಾಗಿರುವುದರಿಂದ ತನ್ನ ಜೀವನದ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಅವಳಿಗೆ ಇದೆ ಎಂದು ತಿಳಿಸಿದ್ದಾರೆ.



