September 24, 2026
Thursday, September 24, 2026
spot_img

ಕೋಲಿ, ಬೆಸ್ತ, ಕಬ್ಬಲಿಗ, ಅಂಬಿಗ, ಬಾರ್ಕಿ ಸೇರಿದಂತೆ ವಿವಿಧ ಸಮುದಾಯ ಎಸ್‌ಟಿಗೆ ಸೇರಿಸಲು ಶಿಫಾರಸು: ಸಚಿವ ಬೋಸರಾಜು


ಹೊಸದಿಗಂತ ಡಿಜಿಟಲ್ ಡೆಸ್ಕ್:


ಕೋಲಿ, ಬೆಸ್ತ, ಕಬ್ಬಲಿಗ, ಅಂಬಿಗ ಹಾಗೂ ಬಾರ್ಕಿ ಸೇರಿದಂತೆ ವಿವಿಧ ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗುವುದು ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.


ವಿಧಾನ ಪರಿಷತ್ತಿನ ಗಮನಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ನ ತಿಪ್ಪಣ್ಣಪ್ಪ ಕಮಕನೂರು ಹಾಗೂ ಬಿಜೆಪಿ ಸದಸ್ಯ ತಳವಾರ ಸಾಬಣ್ಣ ಅವರು ಈ ವಿಷಯ ಪ್ರಸ್ತಾಪಿಸಿ, ಈ ಸಮುದಾಯಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಮನವಿ ಮಾಡಿದರು.

ಮುಖ್ಯಮಂತ್ರಿಯವರ ಪರವಾಗಿ ಉತ್ತರ ನೀಡಿದ ಸಭಾನಾಯಕ ಬೋಸರಾಜು, ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೂಲಕ ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ವರದಿ ಸಲ್ಲಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು. ವರದಿ ಬಂದ ಕೂಡಲೇ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !