March 12, 2026
Thursday, March 12, 2026
spot_img

WEATHER | ರಾಜ್ಯದಲ್ಲಿ ಮಾಮೂಲಿ ಒಣಹವೆ, ಬೆಂಗಳೂರಿನಲ್ಲಿ ಹೀಟ್‌ ಸ್ಟ್ರೋಕ್‌ ಭಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು ಬೆಂಗಳೂರಿನಲ್ಲಿ ಮಾತ್ರ ಹೀಟ್‌ ಸ್ಟ್ರೋಕ್‌ ಭಯ ಇದೆ. ಮಾರ್ಚ್‌ ಎರಡನೇ ವಾರದಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಳವಾಗಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹೀಟ್‌ ಸ್ಟ್ರೋಕ್‌ ಆಗುವ ಸಾಧ್ಯತೆ ಇದ್ದು, ಜನರಿಗೆ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !