March 12, 2026
Thursday, March 12, 2026
spot_img

ಆತಂಕ ಬೇಡ, ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ: ಗ್ರಾಹಕರಿಗೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಭರವಸೆ


ಹೊಸದಿಗಂತ ಡಿಜಿಟಲ್ ಡೆಸ್ಕ್:


ಪ್ರಸ್ತುತ ಜಾಗತಿಕ ಬಿಕ್ಕಟ್ಟಿನ ಅಡೆತಡೆಗಳ ನಡುವೆಯೂ ದೇಶದಲ್ಲಿ ಅಡುಗೆ ಅನಿಲ ಪೂರೈಕೆ ಸುಗಮವಾಗಿರುವಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.


ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಾರತ್ ಪೆಟ್ರೋಲಿಯಂ, ಆಮದು ಪ್ರಕ್ರಿಯೆಯಲ್ಲಿ ಉಂಟಾಗಿರುವ ಅನಿರೀಕ್ಷಿತ ಅಡೆತಡೆಗಳಿಂದಾಗಿ ಲಭ್ಯವಿರುವ ದಾಸ್ತಾನನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.


ಎಲ್‌ಪಿಜಿ ಸಿಲಿಂಡರ್ ವಿತರಣೆಯಲ್ಲಿ ಗೃಹ ಬಳಕೆದಾರರಿಗೆ ಮೊದಲ ಆದ್ಯತೆ ನೀಡಲಾಗಿದೆ. ಅಡುಗೆ ಅನಿಲದ ಕೊರತೆಯಾಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಲಭ್ಯವಿರುವ ಪೂರೈಕೆಯನ್ನು ವೈಜ್ಞಾನಿಕವಾಗಿ ವಿತರಣೆ ಮಾಡಲಾಗುತ್ತಿದೆ. ವಾಣಿಜ್ಯ ಹಾಗೂ ಇತರ ಎಲ್‌ಪಿಜಿ ಪೂರೈಕೆಯ ಬೇಡಿಕೆಗಳನ್ನು ಪರಿಶೀಲಿಸಲು BPCL, ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರನ್ನೊಳಗೊಂಡ ‘ಜಂಟಿ ಸಮಿತಿ’ಯನ್ನು ರಚಿಸಲಾಗಿದೆ. ಈ ಸಮಿತಿಯು ಪೂರೈಕೆ ಪರಿಸ್ಥಿತಿಯನ್ನು ನಿರಂತರವಾಗಿ ಪರಾಮರ್ಶಿಸುತ್ತಿದೆ ಎಂದು ತಿಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !