March 12, 2026
Thursday, March 12, 2026
spot_img

ತಂತ್ರಜ್ಞಾನ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತಿರುವ ಕರ್ನಾಟಕ: ಐಐಐಟಿ ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಸ್ಥಾಪನೆ


ಹೊಸದಿಗಂತ ಡಿಜಿಟಲ್ ಡೆಸ್ಕ್:


ಐಐಐಟಿ ಧಾರವಾಡದ ಕ್ವಾಂಟಮ್ ಕಂಪ್ಯೂಟಿಂಗ್ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ‘ಕ್ವಾಂಟಮ್ ಇಂಡಸ್ 25-ಕ್ವಿಟ್’ ಕ್ವಾಂಟಮ್ ಕಂಪ್ಯೂಟರ್ ಅನ್ನು ಸ್ಥಾಪಿಸುವ ಮೂಲಕ ಮತ್ತು ಐಐಐಟಿ ರಾಯಚೂರು ಈ ಯೋಜನೆಯಲ್ಲಿ ಜಂಟಿಯಾಗಿ ಪಾಲ್ಗೊಳ್ಳುವ ಮೂಲಕ ಕರ್ನಾಟಕವು ಕ್ವಾಂಟಮ್ ತಂತ್ರಜ್ಞಾನದ ನಾಯಕತ್ವದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಸಾಮಾಜಿಕ ಜಾಲತಾಣದ ಮೂಲಕ ಈ ಮಾಹಿತಿ ನೀಡಿರುವ ಅವರು, ಐಟಿ-ಬಿಟಿ ಇಲಾಖೆಯ ಪ್ರಮುಖ ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮವಾದ ‘ಲೀಪ್’ (LEAP – Local Economic Acceleration Programme) ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದು ಶೈಕ್ಷಣಿಕ ವಲಯ ಹಾಗೂ ಉದ್ಯಮಗಳಿಗೆ ಸುಧಾರಿತ ಕ್ವಾಂಟಮ್ ಕಂಪ್ಯೂಟಿಂಗ್ ಸಾಮರ್ಥ್ಯಗಳನ್ನು ಒದಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಈ ಮಹತ್ವಾಕಾಂಕ್ಷೆಯ ಯೋಜನೆಯು 2 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದೆ. ಆ ಮೂಲಕ 2035ರ ವೇಳೆಗೆ ಕರ್ನಾಟಕವನ್ನು 20 ಬಿಲಿಯನ್ ಡಾಲರ್ ಮೌಲ್ಯದ ಕ್ವಾಂಟಮ್ ಆರ್ಥಿಕತೆಯನ್ನಾಗಿ ಬೆಳೆಸುವ ದೂರದೃಷ್ಟಿಯನ್ನು ಸರ್ಕಾರ ಹೊಂದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !