October 15, 2026
Thursday, October 15, 2026
spot_img

WEATHER | ರಾಜ್ಯದಲ್ಲಿ ಬಿಸಿಲಿನ ಅಬ್ಬರ ಹೆಚ್ಚಳ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಿಸಿಲಿನ ಅಬ್ಬರ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ನೆತ್ತಿ ಮೇಲಿನ ಸೂರ್ಯ ಸುಡುತ್ತಿದ್ದಾನೆ.ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನಿಂದ ಕೂಡಿದ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಬಿಸಿಲು ಹೆಚ್ಚಾಗುತ್ತಿರುವ ಕಾರಣ ಎಲ್ಲರೂ ಆರೋಗ್ಯದ ಬಗ್ಗೆ ಗಮನಹರಿಸಬೇಕಿದೆ. ಮಧ್ಯಾಹ್ನದ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸಿ. ಹೆಚ್ಚು ನೀರು, ಮಜ್ಜಿಗೆ ಸೇವನೆ ಮಾಡಿ. ಮಸಾಲೆಯುಕ್ತ ಪದಾರ್ಥ, ಜಂಕ್‌ ಫುಡ್‌ ತಿನ್ನಬೇಡಿ.

Must Read