ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ’ (PM-KISAN) ಅಡಿಯಲ್ಲಿ 22ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್ನ ಗುವಾಹಟಿಯಲ್ಲಿ ಇಂದು ಬಿಡುಗಡೆ ಮಾಡಿದ್ದಾರೆ.
9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂನಂತೆ ಒಟ್ಟು 18,640 ಕೋಟಿ ರೂ ಹಾಕಲಾಗಿದೆ.
ಈ ಬಾರಿ ಕಳೆದ ಬಾರಿಗಿಂತ ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ ಆಗಿದೆ. ಇಕೆವೈಸಿ ಆಗಿಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಲಕ್ಷಾಂತರ ಮಂದಿಗೆ ಯೋಜನೆಯ ಲಾಭ ಕೈತಪ್ಪಿದೆ.
21ನೇ ಕಂತಿನ ಹಣವನ್ನು 9,35,79,869 ಮಂದಿ ಪಡೆದಿದ್ದರು. ಈ ಬಾರಿ 3.8 ಲಕ್ಷದಷ್ಟು ಸಂಖ್ಯೆ ಕಡಿಮೆ ಆಗಿದೆ.



