ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ಇತ್ತೀಚಿನ ದಿನಗಳಲ್ಲಿ ಹದೆಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ನಾಗರಿಕರಲ್ಲಿ ಆತಂಕ ಹುಟ್ಟಿದ್ದು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕೂಡ ಮುಂಬೈನ ವಾಯು ಮಾಲಿನ್ಯದ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮುಂಬೈ (BMC) ಮತ್ತು ಸಾರ್ವಜನಿಕ ಆರೋಗ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ ಅವರು, ಈ ಸಿಟಿ ಮತ್ತು ಅದರೊಳಗಿರುವ ನಮ್ಮನ್ನು ವಾತಾವರಣ ಉಸಿರುಗಟ್ಟಿಸುತ್ತಿದೆ, ದಯವಿಟ್ಟು ಈ ಸಮಸ್ಯೆಗೊಂದು ಪರಿಹಾರ ಹುಡುಕಿ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಮಕ್ಕಳು ಮತ್ತು ನಿವಾಸಿಗಳು ಶುದ್ಧ ಗಾಳಿಯನ್ನು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಸರ್ಕಾರ ಇದಕ್ಕೆ ಪರಿಹಾರವಾಗಿ ಏನನ್ನಾದರೂ ಮಾಡಬೇಕು ಎಂದು ನಟಿ ಹೇಳಿದ್ದಾರೆ.



