March 13, 2026
Friday, March 13, 2026
spot_img

ಕಾದು ಕುಳಿತಿದ್ದ ರೈತರಿಗೆ ಗುಡ್ ನ್ಯೂಸ್: ಹವಾಮಾನ ಆಧಾರಿತ ಬೆಳೆ ವಿಮೆ ವಿತರಣೆ ಆರಂಭ!

ಹೊಸದಿಗಂತ ಉತ್ತರ ಕನ್ನಡ:

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಫಲ ಸಿಕ್ಕಿದೆ. ಹವಾಮಾನ ವೈಪರೀತ್ಯ ಹಾಗೂ ಎಲೆ ಚುಕ್ಕಿ ರೋಗದಂತಹ ಬಾಧೆಗಳಿಂದ ಕಂಗಾಲಾಗಿದ್ದ ರೈತರಿಗೆ ನೆರವಾಗಲು, ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತವು ಇಂದಿನಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಆರಂಭವಾಗಿದೆ.

ಮೊದಲ ಹಂತವಾಗಿ ಇಂದು ಜಿಲ್ಲೆಯ ಅರ್ಹ ರೈತರ ಖಾತೆಗಳಿಗೆ ಒಟ್ಟು 14 ಕೋಟಿ ರೂಪಾಯಿ ಬೃಹತ್ ಮೊತ್ತವನ್ನು ವರ್ಗಾವಣೆ ಮಾಡಲಾಗಿದೆ.

ಈ ವಿಮೆ ವಿತರಣೆಯ ಪ್ರಕ್ರಿಯೆಯು ಇಂದಿನಿಂದ ನಿರಂತರವಾಗಿ ನಡೆಯಲಿದ್ದು, ಹಂತ ಹಂತವಾಗಿ ಜಿಲ್ಲೆಯ ಎಲ್ಲಾ ಅರ್ಹ ರೈತರನ್ನು ತಲುಪಲಿದೆ.

ಈ ಹಿಂದೆ ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ವಿಮಾ ಮೊತ್ತವು, ಈಗ ಸುಲಲಿತವಾಗಿ ಪಾವತಿಯಾಗುತ್ತಿರುವುದು ಬೆಳೆಗಾರರಲ್ಲಿ ನೆಮ್ಮದಿ ತಂದಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ವಿಮೆ ಶೀಘ್ರವಾಗಿ ಬಿಡುಗಡೆಯಾಗಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ರಾಜ್ಯದ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟದ ಸಮಯದಲ್ಲಿ ಈ ಮೊತ್ತವು ದೊಡ್ಡ ಆಸರೆಯಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !