Thursday, October 16, 2025

ಅಮೆರಿಕದ ತೈಲ ಸುಂಕಕ್ಕೆ ಠಕ್ಕರ್: ಡಿಸೆಂಬರ್‌ನಲ್ಲಿ ಭಾರತಕ್ಕೆ ಬರುತ್ತಾರೆ ರಷ್ಯಾ ಅಧ್ಯಕ್ಷ ಪುಟಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳನ್ನು ಬಲಪಡಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್‌ನಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಕ್ರೆಮ್ಲಿನ್ ಇಂದು ದೃಢಪಡಿಸಿದೆ.

ಚೀನಾದಲ್ಲಿ ನಡೆಯಲಿರುವ ಪ್ರಾದೇಶಿಕ ಶೃಂಗಸಭೆಯ ಸಂದರ್ಭದಲ್ಲಿ ಪುಟಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಕ್ರೆಮ್ಲಿನ್ ಅಧಿಕಾರಿ ಯೂರಿ ಉಷಾಕೋವ್ ಹೇಳಿದ್ದಾರೆ.

ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ. 50ರಷ್ಟು ಸುಂಕವನ್ನು ವಿಧಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

error: Content is protected !!