March 14, 2026
Saturday, March 14, 2026
spot_img

ನಾಲ್ಕೇ ದಿನದಲ್ಲಿ ಎಸ್‌ಎಸ್‌ಎಲ್‌ಸಿ ಎಕ್ಸಾಂ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತಾ ನಿಷೇಧಾಜ್ಞೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ.

ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !