March 14, 2026
Saturday, March 14, 2026
spot_img

CINE | ‘ವಾರಣಾಸಿ’ಗೆ ಎಂಟ್ರಿ ಕೊಟ್ಟ ಕಿಚ್ಚ: ರಾಜಮೌಳಿ ಚಿತ್ರದ ಬಗ್ಗೆ ಶುರುವಾಗಿದೆ ಹೊಸ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ತಮ್ಮ ಬಹುನಿರೀಕ್ಷಿತ ‘ವಾರಣಾಸಿ’ ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಮಾಯಣದ ಕಥೆಯಿಂದ ಪ್ರೇರಣೆ ಪಡೆದಿದೆ ಎನ್ನಲಾಗುತ್ತಿರುವ ಈ ಚಿತ್ರ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. 2027ರ ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಅಭಿನಯಿಸುತ್ತಿದ್ದಾರೆ. ಇದೀಗ ಕನ್ನಡದ ನಟ ಸುದೀಪ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಸಿನಿ ವಲಯದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:

ಮೂಲಗಳ ಪ್ರಕಾರ, ಸುದೀಪ್ ಏಪ್ರಿಲ್ ತಿಂಗಳಲ್ಲಿ ನಡೆಯುವ ಸುಮಾರು 15 ದಿನಗಳ ಶೂಟಿಂಗ್‌ನಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಚಿತ್ರತಂಡದಿಂದಲೂ ಅಥವಾ ಸುದೀಪ್ ಅವರಿಂದಲೂ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಆದರೂ ಈ ಸುದ್ದಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಸುದೀಪ್ ಹಾಗೂ ರಾಜಮೌಳಿ ನಡುವಿನ ಸ್ನೇಹ ಈಗಾಗಲೇ ಪ್ರಸಿದ್ಧವಾಗಿದೆ. ಇಬ್ಬರೂ ಮೊದಲು ಈಗ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಚಿತ್ರದಲ್ಲಿ ಸುದೀಪ್ ವಿಲನ್ ಪಾತ್ರದಲ್ಲಿ ಗಮನ ಸೆಳೆದಿದ್ದರು. ಇದೇ ಕಾರಣದಿಂದ ಮತ್ತೊಮ್ಮೆ ರಾಜಮೌಳಿ ಅವರು ಸುದೀಪ್ ಅವರಿಗೆ ಅವಕಾಶ ನೀಡಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಈಗ ಈ ಬಗ್ಗೆ ಅಧಿಕೃತ ಘೋಷಣೆಗಾಗಿ ಅಭಿಮಾನಿಗಳು ಕಾದು ನೋಡುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !