ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಣ್ಣೆ ಏಟಲ್ಲಿ ಯುವಕನೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಜನ ಯುವಕನಿಗೆ ಥಳಿಸಿದ್ದಾರೆ. ಇದರಿಂದ ಆ ವ್ಯಕ್ತಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
ಈ ಘಟನೆ ಚೆನ್ನೈನಲ್ಲಿ ನಡೆದಿದೆ. ಮೃತರನ್ನು 30 ವರ್ಷದ ಕಲೈಸೆಲ್ವನ್ ಎಂದು ಗುರುತಿಸಲಾಗಿದೆ. ಕಲೈಸೆಲ್ವನ್ ತನ್ನ ಸ್ನೇಹಿತರ ಜೊತೆ ಮದ್ಯ ಕುಡಿದು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ.
ಸಿಟ್ಟಿಗೆದ್ದ ಮಹಿಳೆಯೂ ಬೈದಿದ್ದಾರೆ. ನಂತರ ಜನ ಸೇರಿಕೊಂಡಿದ್ದಾರೆ. ಮಹಿಳೆಯ ಮೇಲೆ ಮೂತ್ರ ಮಾಡಿದ್ದು ತಪ್ಪು ಎಂದು ಹೇಳಿ ಹಲ್ಲೆ ಮಾಡಿದ್ದಾರೆ. ಆ ವೇಳೆ ಕಲೈಸೆಲ್ವನ್ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಲ್ಲೆ ನಡೆಸಿದ ವ್ಯಕ್ತಿ ಗುರುತಿಸಲು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



