March 14, 2026
Saturday, March 14, 2026
spot_img

ಇರಾನ್‌ ನ ಆರ್ಥಿಕ ಶಕ್ತಿ ‘ಖಾರ್ಗ್’ ಮೇಲೆ ಅಮೆರಿಕ ಭಾರೀ ದಾಳಿ: ದ್ವೀಪ ಪೀಸ್ ಪೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆರಿಕ ಇರಾನ್ ವಿರುದ್ಧ ಮತ್ತೊಂದು ಕಠಿಣ ಕ್ರಮ ಕೈಗೊಂಡಿರುವುದಾಗಿ ಹೇಳಿದೆ. ಇರಾನ್‌ನ ಪ್ರಮುಖ ತೈಲ ಕೇಂದ್ರವಾಗಿರುವ ಖಾರ್ಗ್ ದ್ವೀಪ ಮೇಲೆ ಭಾರಿ ಬಾಂಬ್ ದಾಳಿ ನಡೆಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ನಲ್ಲಿ ಟ್ರಂಪ್, ದ್ವೀಪದಲ್ಲಿನ ಸೈನಿಕ ಗುರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ. ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ದಾಳಿಗಳಲ್ಲಿ ಒಂದಾಗಿದೆ ಎಂದು ಅವರು ವಿವರಿಸಿದ್ದಾರೆ. ಆದರೂ ನಾಗರಿಕ ಹಿತದೃಷ್ಟಿಯಿಂದ ತೈಲ ಉತ್ಪಾದನಾ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಾಶಪಡಿಸದಿರಲು ತಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಇದೇ ವೇಳೆ ಹಾರ್ಮುಜ್ ಜಲಸಂಧಿ ಮೂಲಕ ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ತನ್ನ ನಿರ್ಧಾರವನ್ನು ಮರುಪರಿಶೀಲಿಸಲಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿದ್ದರೆ ಅಮೆರಿಕ ನೌಕಾಪಡೆಯು ಈ ಜಲಸಂಧಿಯಲ್ಲಿ ಹಡಗುಗಳಿಗೆ ಬೆಂಗಾವಲು ನೀಡಲಿದೆ ಎಂದೂ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !