ಹೊಸದಿಗಂತ ವರದಿ ಮಡಿಕೇರಿ:
ಕೆರೆಯಲ್ಲಿ ಈಜಲು ತೆರಳಿದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಾಲುಗುಂದ ಗ್ರಾಮದಲ್ಲಿ ಸಂಭವಿಸಿದೆ.
ಹಾಲುಗುಂದ ಗ್ರಾಮದ ನಿವಾಸಿ ಅರುಣ್ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿರುವ ಅಣ್ಣಪ್ಪ (26) ಮೃತ ದುರ್ದೈವಿ.
ಇದನ್ನೂ ಓದಿ:
ಗುರುವಾರ ಸಂಜೆ 6.45ರ ಸುಮಾರಿಗೆ ಕಾಫಿ ತೋಟದ ಕೆರೆಯಲ್ಲಿ ಈಜಲು ತೆರಳಿದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈತನೊಂದಿಗೆ ಇದ್ದ ಇತರ ಕಾರ್ಮಿಕರು ಅಣ್ಣಪ್ಪನನ್ನು ಹುಡುಕಾಡಿದಾಗ ಈತ ಪತ್ತೆಯಾಗಿಲ್ಲ. ಬಳಿಕ ಕೆರೆಯ ಒಳಗೆ ಹುಡುಕಾಡಿದಾಗ ಮೃತ ದೇಹ ಪತ್ತೆಯಾಗಿದೆ.
ಈ ಬಗ್ಗೆ ಮೃತ ಅಣ್ಣಪ್ಪನ ತಾಯಿ ಕಾಮಿ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



