June 30, 2026
Tuesday, June 30, 2026
spot_img

ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ: ಪಾಕಿಸ್ತಾನದ ವಿರುದ್ಧ ಗುಡುಗಿದ ಭಾರತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನವು ಕೆಲ ದಿನಗಳ ಹಿಂದೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದ 16 ನಾಗರಿಕರು ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ವಿಶ್ವದ ಅನೇಕ ರಾಷ್ಟ್ರಗಳು ಪಾಕ್ ಕೃತ್ಯವನ್ನು ವ್ಯಾಪಕವಾಗಿ ಖಂಡಿಸಿದ್ದು, ಇದೀಗ ಬಾರತವು ಕೂಡ ಪಾಕ್ ನಡೆಯನ್ನು ಖಂಡಿಸಿದೆ.

ಈ ಕುರಿತು ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌, ಪಾಕ್ ನ ಈ ಕೃತ್ಯವನ್ನು ಭಾರತ ಬಲವಾಗಿ ಖಂಡಿಸುತ್ತದೆ. ಇದರಿಂದಾಗಿ ಅಲ್ಲಿನ ನಾಗರಿಕರ ಸಾವು, ಹಾಗೂ ಮೂಲ ಸೌಕರ್ಯಗಳ ನಾಶವಾಗಿದೆ ಎಂದು ತಿಳಿಸಿದೆ.

ಯಾವುದೇ ರಾಷ್ಟ್ರವಾದರೂ ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಸಂಪೂರ್ಣವಾಗಿ ಗೌರವಿಸಬೇಕು ಎಂದು ಭಾರತ ತಿಳಿಸುತ್ತದೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !