May 2, 2026
Saturday, May 2, 2026
spot_img

ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣೆಗೆ ಇಂದು ಡೇಟ್ ಫಿಕ್ಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗವು ದಿನಾಂಕಗಳನ್ನು ಘೋಷಣೆ ಮಾಡಲಿದೆ.

ಈ ಕುರಿತು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಂದು ಸಂಜೆ 4 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ನಡೆಯಲಿದ್ದು, ಆಯೋಗವು ಮುಂಬರುವ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.

ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮೇ ಮತ್ತು ಜೂನ್‌ ತಿಂಗಳಲ್ಲಿ ಕೊನೆಗೊಳ್ಳಲಿದೆ. ಹೀಗಾಗಿ ಏಪ್ರಿಲ್‌ನಲ್ಲಿ ಚುನಾವಣೆ ನಡೆದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ.

ಇತ್ತೀಚೆಗೆ ಚುನಾವಣಾ ಮುಖ್ಯಸ್ಥರು ಪಶ್ಚಿಮ ಬಂಗಾಳ,ಅಸ್ಸಾಂ, ತಮಿಳುನಾಡು, ಪುದುಚೇರಿ ಮತ್ತು ಕೇರಳಕ್ಕೂ ಭೇಟಿ ನೀಡಿ, ಅಲ್ಲಿನ ಸಿದ್ಧತೆಗಳ ಪರಿಶೀಲನೆ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !