March 16, 2026
Monday, March 16, 2026
spot_img

ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್ ಸ್ಟಾಕ್: ಆಹಾರ ಅಧಿಕಾರಿಗಳಿಂದ ದಾಳಿ, 25 ಸಿಲಿಂಡರ್ ವಶಕ್ಕೆ

ಹೊಸದಿಗಂತ ವರದಿ ​ಹುಬ್ಬಳ್ಳಿ:

ಅಗತ್ಯಕ್ಕಿಂತ ಹೆಚ್ಚು ಸಂಗ್ರಹಿಸಿಟ್ಟಿದ್ದ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್‌ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರು ಘಟನೆ ಸಿದ್ಧೇಶ್ವರ ಪಾರ್ಕ್‌ನ ಶಿವಸಾಗರ ಹೋಟೆಲ್‌ನಲ್ಲಿ ನಡೆದಿದೆ.

ಆಹಾರ‌ ಇಲಾಖೆಯ ಅಧಿಕಾರಿಗಳು ಪೊಲೀಸ್ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿ ಅನಿಲ ತುಂಬಿದ 25 ಸಿಲಿಂಡರ್‌ಗಳನ್ನು ಪತ್ತೆ ಹಚ್ಚಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್‌ ಸಹ ಮಾಲೀಕ ಸತೀಶ ಬಂಡಿ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ನೀಡಿದ್ದಾರೆ.

ಗೋ ಗ್ಯಾಸ್ ಕಂಪನಿಯಿಂದ ಪೂರೈಕೆಯಾಗುವ ಅನಿಲದ ಸಿಲಿಂಡರ್‌ಗಳನ್ನು ಹೋಟೆಲ್‌ನಲ್ಲಿ ಹೆಚ್ಚುವರಿಯಾಗಿ ದಾಸ್ತಾನು ಮಾಡಲಾಗಿತ್ತು. ಎಲ್ಲಿಂದ ಪೂರೈಕೆಯಾಗಿದೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾರು ಇಲಾಖೆ ವಿಜಯಕುಮಾರ ಹೆಗ್ಗಳಗಿ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !