June 30, 2026
Tuesday, June 30, 2026
spot_img

ಹೊಟೇಲ್ ಉದ್ಯಮಕ್ಕೆ ಶಾಕ್‌ ನೀಡಿದ ರಾಜ್ಯ ಸರ್ಕಾರ: ಆಸ್ಪತ್ರೆ, ರೈಲ್ವೆಗೆ ಮಾತ್ರ ಫುಲ್‌ ಸಪ್ಲೈ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮವಾಗಿ ರಾಜ್ಯದಲ್ಲಿ ಅಡುಗೆ ಅನಿಲದ ಅಭಾವ ತಲೆದೂರಿದ್ದು, ಹೊಟೇಲ್ ಉದ್ಯಮಕ್ಕೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಹೊಟೇಲ್ ಗಳಿಗೆ ಸದ್ಯಕ್ಕೆ ಗ್ಯಾಸ್‌ ಪೂರೈಕೆ ಕಷ್ಟಸಾಧ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ತೈಲ ಕಂಪನಿಗಳ ಪ್ರಮುಖರೊಂದಿಗೆ ಇಂದು ಮಹತ್ವದ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಮತ್ತು ರೈಲ್ವೆ ಕ್ಯಾಂಟೀನ್‌ಗಳಿಗೆ ಅಡೆತಡೆಯಿಲ್ಲದೆ 100% ಸಿಲಿಂಡರ್ ಪೂರೈಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ದೈನಂದಿನ ಬಳಕೆಯ 6,500 ಸಿಲಿಂಡರ್‌ಗಳ ಪೈಕಿ 4,200 ಸಿಲಿಂಡರ್‌ಗಳನ್ನು ಕೇವಲ ‘ಅಗತ್ಯ ವಲಯ’ಕ್ಕೆ ಮೀಸಲಿಡಲು ತೀರ್ಮಾನಿಸಲಾಗಿದೆ.

ಪರಿಸ್ಥಿತಿ ಗಂಭೀರವಾಗಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿ ಅನಗತ್ಯವಾಗಿ ‘ಡಬಲ್‌ ಬುಕ್ಕಿಂಗ್‌’ ಮಾಡಬಾರದು ಮತ್ತು ಗ್ಯಾಸ್‌ ಅನ್ನು ಮಿತವಾಗಿ ಬಳಸಬೇಕು ಎಂದು ಸಚಿವರು ವಿನಂತಿಸಿದ್ದಾರೆ.

ಅನಿಲ ಪೂರೈಕೆ ಸರಾಗಗೊಳಿಸಲು ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಹಡಗುಗಳ ಸಂಚಾರ ಈಗಾಗಲೇ ಆರಂಭವಾಗಿದ್ದು, ಶೀಘ್ರದಲ್ಲೇ ಪರಿಸ್ಥಿತಿ ಸುಧಾರಿಸುವ ಭರವಸೆ ಇದೆ ಎಂದು ಅವರು ತಿಳಿಸಿದರು.

ಈ ಬೆಳವಣಿಗೆಯಿಂದಾಗಿ ಈಗಾಗಲೇ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಹೊಟೇಲ್ ಮಾಲೀಕರು ಮತ್ತು ಸಾರ್ವಜನಿಕರಿಗೆ ಮತ್ತಷ್ಟು ಆತಂಕ ಎದುರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !