October 16, 2026
Friday, October 16, 2026
spot_img

ರಾಜ್ಯಸಭೆಯಲ್ಲಿ ‘ಎಲ್‌ಪಿಜಿ’ ಸದ್ದು: ಕೇಂದ್ರ ಸರಕಾರದ ವಿರುದ್ಧ ಖರ್ಗೆ ಆಕ್ರೋಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎಲ್‌ಪಿಜಿ ಸಿಲಿಂಡರ್ ಕೊರತೆ ಇಂದು ರಾಜ್ಯಸಭೆಯಲ್ಲಿ ಚರ್ಚೆಗೆ ವೇದಿಕೆ ಸೃಷ್ಟಿಸಿತು.

ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮದ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ನೇರ ಆರೋಪಿಸಿದರು.

ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟಿನಿಂದ ದೇಶದ ವಿವಿಧ ಭಾಗಗಳಲ್ಲಿ ಸಾಮಾನ್ಯ ಜನರು, ಹೊಟೇಲ್ ಉದ್ಯಮ, ಹಾಸ್ಟೆಲ್ ಗಳು ಮೊದಲಾದ ಬಳೆಕೆದಾರರು ತೊಂದರೆ ಎದುರಿಸುತ್ತಿದ್ದಾರೆ ಎಂದ ಅವರು, ಮಧ್ಯಪ್ರಾಚ್ಯದಲ್ಲಿ ಯುದ್ಧ ಶುರುವಾದ ಸಮಯದಲ್ಲಿ ಕೇಂದ್ರ ಸರಕಾರ ಜನರಿಗೆ ಇಂಧನ ಕೊರತೆಯ ಸಂಭವದ ಕುರಿತು ಮಾಹಿತಿ ನೀಡಬೇಕಿತ್ತು. ಆದರೆ ಸರಕಾರ ಯಾವುದೇ ಸಿದ್ಧತೆ ಮಾಡಿಕೊಳ್ಳದೆ ದೇಶದಲ್ಲಿ ಸಮಸ್ಯೆ ಹೆಚ್ಚಿಸಿದೆ ಎಂದು ಟೀಕಿಸಿದರು.

Must Read