May 22, 2026
Friday, May 22, 2026
spot_img

ಐಪಿಎಲ್ 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳ ಆಯೋಜನೆಗೆ ಗ್ರೀನ್ ಸಿಗ್ನಲ್; ಮಾರ್ಚ್ 28ಕ್ಕೆ ಆರ್‌ಸಿಬಿ ಮೊದಲ ಪಂದ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ರಾಜ್ಯ ಸರ್ಕಾರ ಅಧಿಕೃತ ಅನುಮತಿ ನೀಡಿದೆ.

ಮಾರ್ಚ್ 13ರಂದು ಕೆಎಸ್‌ಸಿಎ ಅಧಿಕಾರಿಗಳು, ಗೃಹ ಸಚಿವರು ಮತ್ತು ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದ ತಜ್ಞರ ಸಮಿತಿಯ ಸಭೆಯ ಬಳಿಕ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಲಾಗಿದೆ. ಈ ಬಾರಿಯ ಸರಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು ಐದು ಪಂದ್ಯಗಳನ್ನು ಆಡಲಿದೆ.

ಉಳಿದಂತೆ ಆರ್‌ಸಿಬಿಯ ಎರಡು ತವರು ಪಂದ್ಯಗಳು ರಾಯ್‌ಪುರದಲ್ಲಿ ನಡೆಯಲಿವೆ. ಕ್ರೀಡಾಂಗಣದ ಸುರಕ್ಷತೆ ಮತ್ತು ಪ್ರೇಕ್ಷಕರ ಅನುಕೂಲಕ್ಕಾಗಿ ಸರ್ಕಾರ ಮತ್ತು ಕೆಎಸ್‌ಸಿಎ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೇ ಮಾರ್ಚ್ 28ರಂದು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ನೆಚ್ಚಿನ ತಂಡದ ಆಟವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !