March 17, 2026
Tuesday, March 17, 2026
spot_img

ಗ್ಯಾಸ್ ಬಗ್ಗೆ ಚಿಂತೆ ಬೇಡ, ಮಂಗಳೂರಿನಲ್ಲಿ ಇಂದು 26 ಸಾವಿರ ಮೆಟ್ರಿಕ್‌ ಟನ್ ಎಲ್‌ಪಿಜಿ ಅನ್‌ಲೋಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಭಾರತದಲ್ಲಿ ಆಗುತ್ತಿರುವ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆ ಬಗೆಹರಿಯುತ್ತಿದೆ. ಇದೀಗ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ ಇರಾನ್ ಈಗಾಗಲೇ ತೈಲ ಹಾಗೂ ಎಲ್‌ಪಿಜಿ ಸಾಗಿಸುತ್ತಿರುವ ನಾಲ್ಕು ಹಡಗುಗಳಿಗೆ ಅನುಮತಿ ನೀಡಿದ್ದು, ಅವುಗಳಲ್ಲಿ 2 ಹಡಗುಗಳು ಈಗಾಗಲೇ ಭಾರತ ತಲುಪಿವೆ.

ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ಅದರಲ್ಲಿ ಸುಮಾರು 20 ಸಾವಿರ ಮೆಟ್ರಿಕ್ ಟನ್ ಅನ್ನು ಮುಂದ್ರಾ ಬಂದರಿನಲ್ಲಿ ಅನ್‌ಲೋಡ್ ಮಾಡಲಾಗಿದೆ.

ಉಳಿದ 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಇಂದೇ ಮಂಗಳೂರು ಬಂದರಿಗೆ ತಂದು ಅನ್‌ಲೋಡ್ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಸಮಸ್ಯೆ ಕೊನೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ ‘ನಂದಾದೇವಿ’ ಮತ್ತು ‘ಜಗ್ ಲಾಡ್ಕಿ’ ಎಂಬ ಮತ್ತೆರಡು ಹಡಗುಗಳು ಇಂದು ಭಾರತ ತಲುಪುವ ಸಾಧ್ಯತೆ ಇದೆ. ‘ನಂದಾದೇವಿ’ ಹಡಗಿನಲ್ಲಿ ಸುಮಾರು 40 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ‘ಜಗ್ ಲಾಡ್ಕಿ’ ಹಡಗು ಸುಮಾರು 81 ಸಾವಿರ ಟನ್ ಕಚ್ಚಾ ತೈಲವನ್ನು ಹೊತ್ತು ಬರುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !