ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಆನ್‌ಲೈನ್ ವಂಚನೆಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಬಳಸಿ ವೃದ್ಧೆಯೊಬ್ಬರನ್ನು ಮೋಸಗೊಳಿಸಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಮಾರ್ಚ್ 11ರಂದು ಅಪರಿಚಿತರಿಂದ ಬಂದ ಕರೆ ಮೂಲಕ, ಮುಂಬೈ ಶಾಖೆಯಲ್ಲಿ ನಿಮ್ಮ ಹೆಸರಲ್ಲಿ ಖಾತೆ ತೆರೆಯಲಾಗಿದೆ ಮತ್ತು ಆ ಖಾತೆಯಿಂದ ಅಕ್ರಮ ಚಟುವಟಿಕೆಗಳಿಗೆ ಹಣ ಸಾಗುತ್ತಿದೆ ಎಂದು ಹೇಳಿ ವೃದ್ಧೆಯನ್ನು ಭಯಪಡಿಸಿದ್ದಾರೆ. ತನಿಖೆ ನಡೆಯುತ್ತಿದೆ, ಹಣವನ್ನು ತಾತ್ಕಾಲಿಕವಾಗಿ ವರ್ಗಾವಣೆ ಮಾಡಿದರೆ ಒಂದು ಗಂಟೆಯೊಳಗೆ ಮರಳಿ ಸಿಗುತ್ತದೆ ಎಂದು ನಂಬಿಸಿದ್ದಾರೆ.
ಇದನ್ನೂ ಓದಿ:
ವಂಚಕರ ಮಾತು ನಂಬಿದ ಗೀತಾ ಎಂಬ ವೃದ್ಧೆ ತನ್ನಲ್ಲಿದ್ದ ₹38 ಲಕ್ಷವನ್ನು ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿದ್ದಾರೆ. ಅಲ್ಲದೆ, 72 ಗಂಟೆಗಳ ಕಾಲ ಯಾರನ್ನೂ ಸಂಪರ್ಕಿಸಬಾರದು ಎಂದು ಬೆದರಿಕೆ ಹಾಕಲಾಗಿದೆ.
ಹಣ ಮರಳಿ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅವರು ಬಳಿಕ ಪೊಲೀಸರನ್ನು ಸಂಪರ್ಕಿಸಿದ್ದು, ಪೂರ್ವ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಂಚಕರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.



