May 2, 2026
Saturday, May 2, 2026
spot_img

ಸಂಸತ್‌ ಮೆಟ್ಟಿಲಿನ ಮೇಲೆ ಕುಳಿತು ಪಕೋಡ-ಟೀ ಕುಡೀತಾರೆ, ನಿಮ್ಮ ಸಂಸದರಿಗೆ ಬುದ್ಧಿ ಹೇಳಿ ಎಂದ ಎಚ್‌ಡಿಡಿ


ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂಸತ್‌ ಅಧಿವೇಶನದಲ್ಲಿ ಕಾಂಗ್ರೆಸ್‌ ಸದಸ್ಯರು ಕಲಾಪಕ್ಕೆ ತೊಂದರೆ ಕೊಡ್ತಿದ್ದಾರೆ. ನೀವು ಅವರಿಗೆ ಬುದ್ಧಿ ಹೇಳಬೇಕು ಎಂದು ರಾಜ್ಯಸಭಾ ಸದಸ್ಯ ಎಚ್‌.ಡಿ. ದೇವೇಗೌಡ, ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.

ಬಜೆಟ್ ಅಧಿವೇಶನದ ವೇಳೆ ಪ್ರತಿಪಕ್ಷಗಳ ಸದಸ್ಯರು ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಅದರಲ್ಲಿಯೂ ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಹಾಗೂ ಆವರಣದಲ್ಲಿ ಘೋಷಣೆ ಕೂಗುವುದು, ಫಲಕ ಪ್ರದರ್ಶನ ಮಾಡುವುದು, ನಿರ್ದಿಷ್ಟವಾಗಿ ಹೆಸರು ಕೂಗುವುದು, ಧರಣಿ ಮತ್ತು ಕಲಾಪ ಸ್ಥಗಿತ ಆಗುವಂತೆ ಮಾಡುತ್ತಿದ್ದಾರೆ. ಇದು ಸಂಸತ್ತಿನ ಘನತೆ ಕುಗ್ಗಿಸುತ್ತಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಮೆಟ್ಟಿಲುಗಳ ಮೇಲೆ ಚಹಾ ಸೇವನೆ ಮಾಡುವುದು ಸರಿಯಾದ ನಡವಳಿಕೆ ಅಲ್ಲ. ಈ ಹಿಂದೆ ವಿರೋಧ ಪಕ್ಷಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಗೌರವಿಸಿ, ಸಂಯಮದಿಂದ ವರ್ತಿಸಿದ್ದವು. ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ, ಬಿಸ್ಕತ್ತು, ಪಕೋಡಾ ತಿನ್ನುವುದು ಅತಿರೇಕದ ಕ್ರಮಗಳು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !