March 17, 2026
Tuesday, March 17, 2026
spot_img

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ ನೀಟ್ ತರಬೇತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ಸಮರ್ಪಕ ತರಬೇತಿ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂದು ಹೇಳಿದ್ದರು.

ಇದನ್ನೂ ಓದಿ:

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನೀಟ್ ಕಾರಣದಿಂದ ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ ಕಡಿಮೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪರೀಕ್ಷಾ ವ್ಯವಸ್ಥೆ ಮುಂದುವರಿದರೂ, ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗುವ ದಿಶೆಯಲ್ಲಿ ಸರ್ಕಾರ ಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಹಾಗೆಯೇ, ನೀಟ್ ರದ್ದುಗೊಳಿಸುವ ಯತ್ನಗಳಿದ್ದರೂ, ಸುಪ್ರೀಂ ಕೋರ್ಟ್ ತೀರ್ಪಿನಿಂದ ಅದು ಜಾರಿಯಲ್ಲೇ ಮುಂದುವರಿದಿದೆ. ಈ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ಒದಗಿಸುವ ಮೂಲಕ ಅವಕಾಶಗಳನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !