May 22, 2026
Friday, May 22, 2026
spot_img

ಕಾಳಸಂತೆಯಲ್ಲಿ ಎಲ್‌ಪಿಜಿ ಮಾರಾಟ: 15 ಸಾವಿರ ಸಿಲಿಂಡರ್‌ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯುದ್ಧದ ಪರಿಣಾಮವಾಗಿ ಹಲವು ಕಡೆ ಎಲ್‌ಪಿಜಿ ಸಿಲಿಂಡರ್‌ ಸಿಗುತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಕಾಳಸಂತೆಯಲ್ಲಿ ಹೆಚ್ಚು ಹಣಕ್ಕೆ ಸಿಲಿಂಡರ್‌ ಮಾರಾಟ ಮಾಡಿದ್ದಾರೆ.

ಪೊಲೀಸರು ಇದರ ವಿರುದ್ಧ ಕಾರ್ಯಾಚರಣೆ ಮಾಡಿದ್ದು, ಕರ್ನಾಟಕ, ದೆಹಲಿ, ಜಮ್ಮು ಕಾಶ್ಮೀರ, ಕೇರಳ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಬರೋಬ್ಬರಿ 15 ಸಾವಿರ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ದೆಹಲಿಯಲ್ಲಿ 600 ಸಿಲಿಂಡರ್‌ಗಳು, ಉತ್ತರ ಪ್ರದೇಶದಲ್ಲಿ 405 ತಪಾಸಣೆಗಳು ನಡೆದಿವೆ ಹಾಗೂ 10 ಜನರನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ 504 ದಾಳಿ ನಡೆಸಿ ಎಫ್‌ಐಆರ್‌ ದಾಖಲಿಸಲಾಗಿದೆ. ಕರ್ನಾಟಕದಲ್ಲಿ ಬೀದರ್‌ನಲ್ಲಿ 105, ದಾವಣಗೆರೆ ಮತ್ತು ಯಾದಗಿರಿಯಲ್ಲಿ ತಲಾ 20 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !