Sunday, August 31, 2025

ವಾಹನ ಸವಾರರಿಗೆ ದಂಡ ಕಟ್ಟಲು 50% ಡಿಸ್ಕೌಂಡ್: ಒಂದೇ ವಾರದಲ್ಲಿ ಎಷ್ಟು ಹಣ ಸಂಗ್ರಹ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಹನ ಸವಾರರಿಗೆ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದರೆ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಬರೋಬ್ಬರಿ 21 ಕೋಟಿ 86 ಸಾವಿರ ರೂ. ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 50% ಡಿಸ್ಕೌಂಟ್ ಆಫರ್​​ ಶುರುವಾದ ಒಂದು ವಾರದೊಳಗೆ ಅಂದ್ರೆ ಆಗಸ್ಟ್ 23ರಿಂದ ಆಗಸ್ಟ್ 29ರವರೆಗೆ 7,43,160 ಬಾಕಿ ಕೇಸ್‌ಗಳಿಗೆ ವಾಹನ ಮಾಲೀಕರು ದಂಡ ಪಾವತಿಸಿದ್ದಾರೆ.

ಆಗಸ್ಟ್ 21ರಂದು ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ ಆದೇಶ ನೀಡಲಾಗಿತ್ತು. ಆ.23 ರಿಂದ ಸೆ.12 ರ ವರೆಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ವಾಹನ ಸವಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಳೆದ ಆರು ದಿನದಲ್ಲಿ 7,43,160 ಕೇಸ್ ವಿಲೇವಾರಿ ಮಾಡಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹ ಮಾಡಲಾಗಿದೆ.

ಇದನ್ನೂ ಓದಿ