ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಅಶಾಂತಿ ಪರಿಣಾಮವಾಗಿ ಈರುಳ್ಳಿ ಮಾರುಕಟ್ಟೆಯಲ್ಲಿ ಭಾರೀ ದರ ಕುಸಿತ ಕಂಡುಬಂದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿವರೆಗೆ ಇಳಿದಿದೆ. ಉತ್ತಮ ಗುಣಮಟ್ಟದ ಈರುಳ್ಳಿಗೂ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಉತ್ಪನ್ನಕ್ಕೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ.
ಇದನ್ನೂ ಓದಿ:
ಇಂಧನ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯಿಂದಾಗಿ ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಿರುವುದು ಬೇಡಿಕೆಯನ್ನು ಮತ್ತಷ್ಟು ಕುಗ್ಗಿಸಿದ್ದರೆ ಮತ್ತೊಂದೆಡೆ, ಖಾಲಿ ಚೀಲಗಳ ಬೆಲೆ 18-20 ರೂಪಾಯಿಗೆ ಏರಿಕೆಯಾಗಿದ್ದು, ರೈತರು ನಷ್ಟದಲ್ಲಿ ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ.
ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ತರಲಾಗಿರುವ ನೂರಾರು ಕ್ವಿಂಟಾಲ್ ಈರುಳ್ಳಿಗೆ ನಿರೀಕ್ಷಿತ ಬೆಲೆ ಸಿಗುತ್ತಿಲ್ಲ ಎನ್ನುವುದೇ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.



