Sunday, August 31, 2025

ಚೀನಾಗೆ ಬಂದಿಳಿದ ಮೋದಿ: ಟಿಯಾಂಜಿನ್‌ನಲ್ಲಿ ಸಿಕ್ಕಿತು ಪ್ರಧಾನಿಗೆ ಅದ್ದೂರಿ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಳು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೀನಾಕ್ಕೆ ಬಂದಿಳಿದಿದ್ದು, ಟಿಯಾಂಜಿನ್‌ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಎರಡು ದಿನಗಳ ಜಪಾನ್ ಭೇಟಿ ಮುಗಿಸಿದ ಪ್ರಧಾನಿ ಮೋದಿ, ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(SCO)ದ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಚೀನಾಗೆ ಆಗಮಿಸಿದ್ದಾರೆ.

ಪ್ರಧಾನಿ ಮೋದಿ 2018ರಲ್ಲಿ ಕೊನೆಯ ಬಾರಿ ಚೀನಾ ಪ್ರವಾಸ ಕೈಗೊಂಡಿದ್ದರು.

ಇದನ್ನೂ ಓದಿ