March 19, 2026
Thursday, March 19, 2026
spot_img

ನಿಮ್ಮ ಯುಗಾದಿ ಸಡಗರದಿಂದ ಕೂಡಿರಲಿ: ಕನ್ನಡಿಗರಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುಗಾದಿ ಹಬ್ಬದ ಸಂಭ್ರಮದ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿ ಹೊಸ ವರ್ಷದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ವಸಂತ ಋತುವಿನ ಆಗಮನವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಅವಕಾಶಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ.

ಯುಗಾದಿಯ ಮಹತ್ವವನ್ನು ವಿವರಿಸಿದ ಪ್ರಧಾನಿ, ಪ್ರಕೃತಿಯ ಹಸಿರು, ಹೂಗಳ ಸುವಾಸನೆ ಮತ್ತು ಹಣ್ಣುಗಳ ಆಗಮನವು ಹೊಸ ಶಕ್ತಿಯ ಸಂಕೇತ ಎಂದು ಹೇಳಿದ್ದಾರೆ. ಇದೇ ಸಮಯದಲ್ಲಿ ರೈತರು ಹೊಸ ಕೃಷಿ ಚಟುವಟಿಕೆಗಳಿಗೆ ಸಜ್ಜಾಗುತ್ತಿರುವುದನ್ನು ಅವರು ಶ್ಲಾಘಿಸಿದ್ದಾರೆ. ಜೀವನದ ಸಿಹಿ-ಕಹಿಗಳನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ಯುಗಾದಿ ನೀಡುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:

ಕರ್ನಾಟಕದ ಜನತೆಗೆ ವಿಶೇಷವಾಗಿ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ, ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಭರವಸೆ ಮತ್ತು ಸಕಾರಾತ್ಮಕ ಬದಲಾವಣೆ ತರಲಿ ಎಂದು ಹಾರೈಸಿದ್ದಾರೆ. “ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂಬ ಸಂದೇಶದ ಮೂಲಕ ಅವರು ಕನ್ನಡಿಗರ ಮನಗೆದ್ದಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ತರ ಭಾರತದ ಹಲವು ರಾಜ್ಯಗಳ ಜನತೆಗೆ ಪ್ರಧಾನಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದು, ವಿಕ್ರಮ ಸಂವತ್ 2083 ಹಾಗೂ ಚೈತ್ರ ನವರಾತ್ರಿಯ ಮಹತ್ವವನ್ನು ಉಲ್ಲೇಖಿಸಿದ್ದಾರೆ. ಹೊಸ ವರ್ಷವು ದೇಶದ ಅಭಿವೃದ್ಧಿಗೆ ಶಕ್ತಿ ನೀಡಲಿ ಎಂದು ಅವರು ಆಶಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !