May 4, 2026
Monday, May 4, 2026
spot_img

ಇರಾಕ್‌ನಲ್ಲಿನ ಅಮೆರಿಕ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಇರಾಕ್ ನಲ್ಲಿರುವ ಅಮೆರಿಕ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್ ದಾಳಿ ನಡೆದಿರುವುದು ವರದಿಯಾಗಿದೆ. ಈ ದಾಳಿಯಿಂದ ಉತ್ತರ ಭಾಗದ ಎರ್ಬಿಲ್ ನಗರದಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿದೆ.

ಜೊತೆಗೆ, ಕುವೈತ್‌ನಲ್ಲಿರುವ ಅಮೆರಿಕ ಸೇನಾ ತಾಣದಲ್ಲೂ ಸ್ಫೋಟಗಳು ಸಂಭವಿಸಿದ ಮಾಹಿತಿ ಹೊರಬಂದಿದೆ. ಅರೆಸೈನಿಕ ನೆಲೆಯ ಮೇಲೆ ನಡೆದ ವಾಯುದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂಬ ವರದಿಗಳು ಬಂದಿವೆ.

ಇದನ್ನೂ ಓದಿ:

ಈ ನಡುವೆ, ಇರಾನ್ ತನ್ನ ಪ್ರದೇಶದಿಂದ ಕ್ಷಿಪಣಿಗಳನ್ನು ಹಾರಿಸಿದ್ದು, ಬೆದರಿಕೆಯನ್ನು ತಡೆಯಲು ಇಸ್ರೇಲ್ ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಿವೆ. ಪಶ್ಚಿಮ ಏಷ್ಯಾ ಹಾಗೂ ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಇತ್ತೀಚೆಗೆ ಇಸ್ರೇಲ್, ಇರಾನ್‌ನ ಸೌತ್ ಪಾರ್ಸ್ ಅನಿಲ ಕ್ಷೇತ್ರದ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತಿಯಾಗಿ ಇರಾನ್ ಕತಾರ್‌ನ ಎಲ್‌ಎನ್‌ಜಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿದೆ. ಈ ಘಟನಾವಳಿಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !