ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಮ್ಮನ ಹುಟ್ಟು ಹಬ್ಬದ ನೆನಪಿಗೆ ‘ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ’ ಎಂಬ ಹಸಿರು ಕ್ರಾಂತಿಗೆ ಚಾಲನೆ ನೀಡಿದ್ದಾರೆ.
‘ಪ್ರತಿ ಮರಕ್ಕೂ ಒಂದು ಕಥೆ ಇದೆ. ಈ ಮರವು ನನ್ನ ಅಮ್ಮನ ಕಥೆ ಹೇಳಲಿ’ ಎಂದು ಹೇಳಿದ್ದಾರೆ.
ಸುದೀಪ್ ಅವರ ತಾಯಿ ಸುಜಾತ ಅವರ ಜನ್ಮ ದಿನ ಇಂದು (ಆಗಸ್ಟ್ 30). ಸುದೀಪ್ ಅವರು ತಾಯಿಯವರ ನೆನಪಿಗಾಗಿ ಸಾಮಾಜಿಕ ಕಾರ್ಯವೊಂದಕ್ಕೆ ಕೈ ಹಾಕಿದ್ದಾರೆ. ಸುದೀಪ್ ಅವರ ತಾಯಿಯವರ ಹುಟ್ಟುಹಬ್ಬದ ಪ್ರಯುಕ್ತ ಗಿಡಗಳನ್ನು ನೆಡುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ನ ವತಿಯಿಂದ ಇಂದು ಸುದೀಪ್ ಅವರ ತಾಯಿಯ ನೆನಪಿಗಾಗಿ ಗಿಡಗಳನ್ನು ನೆಡಲಾಯ್ತು. ಈ ಕಾರ್ಯಕ್ಕೆ ಸ್ವತಃ ಸುದೀಪ್ ಉದ್ಘಾಟನೆ ಮಾಡಿದರು. ಸುದೀಪ್ ಹಾಗೂ ಅವರ ಕುಟುಂಬದವರು ಸೇರಿಕೊಂಡು ತೆಂಗಿನ ಗಿಡವೊಂದನ್ನು ನೆಟ್ಟರು.
ತಾಯಿಯವರ ನೆನಪಿನಲ್ಲಿ ಹಲವಾರು ಗಿಡಗಳನ್ನು ನೆಡಲಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ ಈ ಸಮಾಜ ಮುಖಿ ಕಾರ್ಯವನ್ನು ಮುನ್ನಡೆಸಿಕೊಂಡು ಹೋಗಲಿದೆ.
ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಅಕ್ಟೋಬರ್ 20, 2024ರಂದು ವಯೋಸಹಜವಾದ ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಸರೋಜಾ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.