March 19, 2026
Thursday, March 19, 2026
spot_img

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಸಾ*ವು, ಮತ್ತೊಬ್ಬನ ಸ್ಥಿತಿ ಗಂಭೀರ

ಹೊಸದಿಗಂತ ಮಡಿಕೇರಿ:

ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿ ಎಂಬಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾದಾಪುರದ ಜಂಬೂರು ನಿವಾಸಿ ಅನಿಲ್ ಕುಮಾರ್ ಮೃತಪಟ್ಟ ದುರ್ದೈವಿ. ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಗರಗಂದೂರಿನ ದಿನೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಮಧ್ಯಾಹ್ನ ಸುಮಾರು 2:30ರ ವೇಳೆಗೆ ಅನಿಲ್ ಕುಮಾರ್ ಮತ್ತು ದಿನೇಶ್ ಸುಂಟಿಕೊಪ್ಪದಿಂದ ಮಾದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕೆಂಚೆಟ್ಟಿ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅನಿಲ್ ಕುಮಾರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !